ಮಂಗಳೂರು, ಮಾ 03 (DaijiworldNews/SM): ಸುರತ್ಕಲ್ ಸಮೀಪದ ಕಾಟಿಪಳ್ಳ 4ನೇ ಬ್ಲಾಕ್ನಲ್ಲಿ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನಿಗೆ ನ್ಯಾಯಾಲಯ ಜಾಮೀನು ಮಂಜೂರುಗೊಳಿಸಿದೆ.
ಪ್ರಕರಣದ ತನಿಖೆ ಮುನ್ನಡೆದಿದ್ದು, ಈ ನಡುವೆ ಪ್ರಕರಣದ ಮೂರನೇ ಆರೋಪಿ ಪವನ್ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಜಾಮೀನು ಕೊರಿ ಅರ್ಜಿ ಸಲ್ಲಿಸಿದ್ದ. ಧೀರ್ಘ ವಾದ ಪ್ರತಿವಾದದ ಬಳಿಕ ಇದೀಗ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶರಾದ ರವೀಂದ್ರ ಜೋಷಿ ಅವರು ಗುರುವಾರ ಶರತ್ತು ಬದ್ದ ಜಾಮೀನು ಮಂಜೂರು ಮಾಡಿದ್ದಾರೆ. ಆರೋಪಿಯ ಪರವಾಗಿ ಮಂಗಳೂರಿನ ವಕೀಲರಾದ ಶ್ರೇಯಸ್ . ಎಸ್ .ಕೆ ಮತ್ತು ಹರ್ಷಿತ್ ವಾದಿಸಿದರು.
ಘಟನೆ ಹಿನ್ನೆಲೆ
ಮಂಗಳೂರು ಹೊರವಲಯದ ಸುರತ್ಕಲ್ನ ಕಾಟಿಪಳ್ಳ ನಾಲ್ಕನೇ ಬ್ಲಾಕ್ನಲ್ಲಿ ಜಲೀಲ್(45) ಎಂಬುವರಿಗೆ ದುಷ್ಕರ್ಮಿಗಳು ಡಿ. 24ರಂದು ಚಾಕು ಇರಿದಿದ್ದಾರೆ. ಜಲೀಲ್ ಕಾಟಿಪಳ್ಳದ ನೈತಂಗಡಿ ರಸ್ತೆಯಲ್ಲಿರುವ ಲತೀಫಾ ಸ್ಟೋರ್ ಮಾಲಿಕರಾಗಿದ್ದರು. ಸ್ಟೋರ್ನಲ್ಲಿದ್ದ ಜಲೀಲ್ಗೆ ದುಷ್ಕರ್ಮಿಗಳ ಗುಂಪು ಚಾಕು ಇರಿದು ಪರಾರಿಯಾಗಿದ್ದರು. ಇದರಿಂದ ತೀರ್ವ ಗಯಗೊಂಡಿದ್ದ ಜಲೀಲ್ರನ್ನು ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜಲೀಲ್ ಸಾವನ್ನಪ್ಪಿದ್ದರು. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.