ಕಾರ್ಕಳ, ಮಾ 13 (DaijiworldNews/MS): ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಕಲ್ಲಿಮಾರ್ ವಿನಲ್ಲಿ ಪುರಾತನ ಕಾಲದ ನಾಗಕಲ್ಲು ಪತ್ತೆಯಾಗಿದೆ.
ನಾಗ ಬನದ ಸಮೀಪ ಅಗೆಯುವಾಗ ಈ ಕಲ್ಲು ಪತ್ತೆಯಾಗಿದೆ. ನಾಗಕಲ್ಲು ತುಂಡಾಗಿದ್ದು ಬಹಳ ಪುರಾತನವಾದ ಅಪರೂಪದ ಶಿಲ್ಪ ಕಲೆ ಇದರಲ್ಲಿ ಗೋಚರಿಸುತ್ತಿದೆ. ರವಿಪ್ರಸಾದ್ ಭಟ್ ಸಹಕಾರದಲ್ಲಿ ಈ ಅಪರೂಪದ ಶಿಲ್ಪರೂಪದ ನಾಗಕಲ್ಲು ಪತ್ತೆಯಾಗಿದೆ.
ಸುಮಾರು 500 ವರ್ಷಗಳ ಹಿಂದಿನ ಪುರಾತನ ಶಿಲ್ಪ ಕಲೆಯ ಹಾಗೆ ಕಂಡುಬರುತ್ತಿದೆ.