ಮಂಗಳೂರು, ಮಾ 17(DaijiworldNews/MS): ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ ಹೊಂದಿದ್ದ ಪ್ರಕರಣದಲ್ಲಿ ಮೂಲ್ಕಿ ಮುಲ್ಕಿ ನಗರ ಪಂಚಾಯತ್ ಜೂನಿಯರ್ ಇಂಜಿನಿಯರ್ ಗೆ ಶಿಕ್ಷೆ ವಿಧಿಸಿ ಮಂಗಳೂರಿನ 3 ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ನೀಡಿದೆ.
ಇಂಜಿನಿಯರ್ ಪದ್ಮನಾಭ ಎನ್ .ಕೆ. ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ ಸಂಪಾದಿಸಿದ್ದು ದಾಳಿ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಇವರ ವಿರುದ್ದ 2015 ರಲ್ಲಿ ಪ್ರಕರಣ ದಾಖಲಾಗಿತ್ತು. 4 ವರ್ಷ ಜೈಲು ಶಿಕ್ಷೆ ಮತ್ತು 26 ಲಕ್ಷದ 50 ಸಾವಿರ ರೂ. ದಂಡ ಮತ್ತು ದಂಡ ಕಟ್ಟಲು ವಿಫಲನಾದರೆ ಮತ್ತೆ 6 ತಿಂಗಳ ಜೈಲು ಶಿಕ್ಷೆ ವಿಧಿಸಿ ನ್ಯಾಯಾಧೀಶ ಬಿ.ಬಿ.ಜಕಾತಿ ಅಂತಿಮ ತೀರ್ಪು ನೀಡಿದ್ದಾರೆ.
ಆರೋಪಿ ಪ್ರಸ್ತುತ ಮೂಡುಬಿದಿರೆ ಪುರಸಭೆಯಲ್ಲಿ ಎಂಜಿನಿಯರ್ ಆಗಿದ್ದಾನೆ.