ಮಂಗಳೂರು, ಮಾ 21 (DaijiworldNews/HR): ಕಾರೊಂದು ರಿವರ್ಸ್ ತೆಗೆಯುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಸರಣಿ ಅಪಘಾತ ಸಂಭವಿಸಿರುವ ಘಟನೆ ಮಂಗಳೂರಿನ ಕೋರ್ಟ್ ರಸ್ತೆಯಲ್ಲಿ ನಡೆದಿದೆ.
ಕಾರು ರಿವರ್ಸ್ ತೆಗೆಯುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಆಟೋ ಮತ್ತ್ತು ಕಾರೊಂದಕ್ಕೆ ಡಿಕ್ಕಿ ಹೊಡೆದು ರಸ್ತೆ ಪಕ್ಕ ಪಲ್ಟಿಯಾಗಿದ್ದು, ಕಾರಿಲ್ಲಿದ್ದ ಚಾಲಕನಿಗೆ ಅಲ್ಪ ಸ್ವಲ್ಪ ಗಾಯಗಳಾಗಿದ್ದರೆ, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ ಕಾರನ್ನು ಇಳಿಜಾರಿನಲ್ಲಿ ರಿವರ್ಸ್ ತೆಗೆಯು ಸಂದರ್ಭ ಚಾಲಕನ ಚಪ್ಪಲ್ ಎಕ್ಸೆಲೇಟರ್ ಪೆಡಲ್ ಮಧ್ಯೆ ಸಿಕ್ಕಿಹಾಕಿಕೊಂಡು ಕಾರಿನ ವೇಗ ಹೆಚ್ಚಾಗಿ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.