ಮಂಗಳೂರು, ಮಾ 21 (DaijiworldNews/DB): ಮಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ 8.50 ಕೋಟಿ ರೂ.ಗಳ ವೆಚ್ಚದಲ್ಲಿ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾವೂರು ಕೆರೆಯ ಪುನಶ್ಚೇತನ ಹಾಗೂ ಅಭಿವೃದ್ಧಿ ಕಾಮಗಾರಿಯ ಉದ್ಘಾಟನೆ ಮಾರ್ಚ್ 21ರ ಮಂಗಳವಾರ ನಡೆಯಿತು.
ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಡಾ. ಭರತ್ ಶೆಟ್ಟಿ, ಮೇಯರ್ ಜಯಾನಂದ ಅಂಚನ್ ಉದ್ಘಾಟಿಸಿದರು.
ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಗಳು, ಸಾರ್ವಜನಿಕರು, ಸ್ಮಾರ್ಟ್ ಸಿಟಿ ಅಧಿಕಾರಿಗಳಾದ ಅರುಣ್ ಪ್ರಭಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.