ಮಂಗಳೂರು, ಮಾ 21 (DaijiworldNews/MS): ನಗರದ ಕಂಕನಾಡಿ ಗರೋಡಿಯ ಬಳಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡು, ಗುಣಮುಖರಾದ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಕೊಟ್ಟ ಮಾತಿನಂತೆ ಇಂದು(ಮಾ.22) ಗುರುಬೆಳದಿಂಗಳು ಫೌಂಡೇಶನ್ 6 ಲಕ್ಷ ರೂಪಾಯಿ ವೆಚ್ಚದಲ್ಲಿ ನವೀಕರಿಸಿದ ಮನೆಯನ್ನು ಹಸ್ತಾಂತರಿಸಿದೆ.
2022ರ ನವೆಂಬರ್ 19 ರಂದು ಮಂಗಳೂರು ನಗರದ ಗರೋಡಿ ಸಮೀಪದ ರಸ್ತೆಯಲ್ಲಿ ಹೋಗುತ್ತಿದ್ದಾಗ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟವಾಗಿತ್ತು. ಘಟನೆಯಲ್ಲಿ ಗಾಯಗೊಂಡು ಪುರುಷೋತ್ತಮ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೇ ವೇಳೆ ಅವರ ಪುತ್ರಿಯ ಮದುವೆ ನಿಶ್ಚಯವಾಗಿದ್ದರಿಂದ, ಪುರುಷೋತ್ತಮ್ ಮನೆಯ ದುರಸ್ತಿ ಕಾರ್ಯವನ್ನ ಮಾಡಬೇಕೆಂದು ನಿಶ್ಚಯಿಸಿದ್ದರು. ಆದರೆ ಈ ದುರ್ಘಟನೆ ಬಳಿಕ ಮನೆ ದುರಸ್ತಿಯಾಗದೆ ಕಂಗೆಟ್ಟಿದ್ದರು. ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ತಂಡದೊಂದಿಗೆ ಭೇಟಿಯಾದಾಗ ಪುರುಷೋತ್ತಮ್ ತಮ್ಮ ನೋವನ್ನು ತೋಡಿಕೊಂಡಿದ್ದರು. ಈ ವೇಳೆ ಗುರು ಬೆಳದಿಂಗಲು ಫೌಂಡೇಶನ್ ಅವರು ಮನೆ ನವೀಕರಿಸುವ ಭರವಸೆ ನೀಡಿದ್ದರು.
ಅದರಂತೆ ಇಂದು ಗುರು ಬೆಳದಿಂಗಲು ಫೌಂಡೇಶನ್ ಕೊಟ್ಟ ಮಾತಿನಂತೆ ಮನೆ ನವೀಕರಣಗೊಳಿಸಿ ಯುಗಾದಿ ಹಬ್ಬದ ಗಿಪ್ಟ್ ನೀಡಿದ್ದಾರೆ.