ಸುಳ್ಯ, ಮಾ 25 (DaijiworldNews/DB): ಸುಳ್ಯದ ಗುರುಂಪು ಬಳಿ ಬರೆ ಜರಿದು ಬಿದ್ದು ಮಣ್ಣಿನಡಿ ಸಿಲುಕಿದ್ದ ಮೂವರು ಕಾರ್ಮಿಕರ ಮೃತದೇಹ ಪತ್ತೆಯಾಗಿದೆ.
ಗಾಂಧಿನಗರ-ಆಲೆಟ್ಟಿ ರಸ್ತೆಯಲ್ಲಿ ಕಾರ್ಮಿಕರು ಸೆಂಟರಿಂಗ್ ಕೆಲಸ ಮಾಡುತ್ತಿದ್ದ ವೇಳೆ ಗುರುಂಪು ಬಳಿ ಬರೆ ಜರಿದು ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಬಿದ್ದಿದೆ, ಇದರಿಂದ ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದರು.
ಜೆಸಿಬಿ ಮುಖಾಂತರ ಮಣ್ಣು ತೆಗೆಯುವ ಕೆಲಸ ನಡೆದಿದ್ದು, ಸ್ಥಳಕ್ಕೆ ಶಾಸಕ ಅಂಗಾರ ಅವರು ಭೇಟಿ ನೀಡಿದ್ದಾರೆ.