ಬಂಟ್ವಾಳ, ಮಾ 26 (DaijiworldNews/HR): ಕೆಎಸ್ಆರ್ಟಿಸಿ ಬಸ್ಸಿನಲ್ಲಿ ಬಾಲಕಿಯೋರ್ವಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಸ್ ನಿವಾರ್ಹಕನನ್ನು ಬಂಟ್ವಾಳ ನಗರ ಠಾಣೆಯ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾಗಲಕೋಟೆ ನಿವಾಸಿ ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ.ಬಸ್ ನಿರ್ವಾಹಕ ದವಾಳ್ ಸಾಬ್ ಎಂಬಾತನನ್ನು ಬಂಧಿಸಲಾಗಿದ್ದು, ಈತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ವಿದ್ಯಾರ್ಥಿನಿ ಶನಿವಾರ ಮಧ್ಯಾಹ್ನದ ವೇಳೆ ಶಾಲೆಯಿಂದ ಮನೆಗೆ ಕಲ್ಲಡ್ಕದಿಂದ ಬಿ.ಸಿ.ರೋಡಿಗೆ ಬರುವ ವೇಳೆ ನಿವಾರ್ಹಕ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಬಾಲಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದಳು.
ಇನ್ನು ಪ್ರಕರಣ ದಾಖಲಾದ ಅರ್ಧ ಗಂಟೆಯಲ್ಲಿ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೋಲಿಸ್ ಇನ್ಸ್ ಪೆಕ್ಟರ್ ವಿವೇಕಾನಂದ ನೇತೃತ್ವದಲ್ಲಿ ಬಂಟ್ವಾಳ ನಗರ ಠಾಣಾ ಎಸ್.ಐ. ರಾಮಕೃಷ್ಣ ಅವರ ತಂಡ ಬಂಧಿಸಿದೆ.