ಬಂಟ್ವಾಳ, ಮಾ 26 (DaijiworldNews/DB): ಯುವಕನೊಬ್ಬ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಬಂಟ್ವಾಳದ ಗೂಡಿನಬಳಿ ಎಂಬಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ.
ಪುತ್ತೂರು ಸಮೀಪ ಕೆಮ್ಮಿಂಜೆ ನಿವಾಸಿ, ಪುತ್ತೂರು ಕೋರ್ಟ್ ರಸ್ತೆಯಲ್ಲಿ ಅಂಗಡಿ ಹೊಂದಿರುವ ವಿಘ್ನೇಶ್ ಕಾಮತ್ (32) ಆತ್ಮಹತ್ಯೆಗೆ ಶರಣಾದ ಯುವಕ. ಭಾನುವಾರ ಮಧ್ಯಾಹ್ನ ಸ್ಕೂಟರ್ನಲ್ಲಿ ಪಾಣೆಮಂಗಳೂರು ಗೂಡಿನಬಳಿಗೆ ಆಗಮಿಸಿದ್ದ ವಿಘ್ನೇಶ್ ಅಲ್ಲೇ ನೇತ್ರಾವತಿ ಹಳೆ ಸೇತುವೆ ಬಳಿ ಸ್ಕೂಟರ್ ನಿಲ್ಲಿಸಿ ನದಿಗೆ ಹಾರಿದ್ದಾರೆ. ಕೂಡಲೇ ಸ್ಥಳೀಯ ಈಜುಗಾರರು ನದಿಗೆ ಹಾರಿ ಆತನನ್ನು ರಕ್ಷಿಸುವ ಪ್ರಯತ್ನ ಮಾಡಿದ್ದರಾದರೂ ಸಾಧ್ಯವಾಗಲಿಲ್ಲ. ಬಳಿಕ ವಿಘ್ನೇಶ್ ಮೃತದೇಹವನ್ನು ಮೇಲಕ್ಕೆತ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ಆಗಮಿಸಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821