ಮಂಗಳೂರು, ಮಾ. 26 (DaijiworldNews/SM): ಕಟ್ಟಡ ನಿರ್ಮಾಣ ಕಾರ್ಮಿಕರ ಬೇಡಿಕೆಗಳಿಗಾಗಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ನೇತೃತ್ವದಲ್ಲಿ ರಾಜ್ಯಾದ್ಯಂತ ಮಾರ್ಚ್ 27ರ ಸೋಮವಾರ ಪ್ರತಿಭಟನೆಗೆ ನಿರ್ಧಾರ ಕೈಗೊಳ್ಳಲಾಗಿದೆ.
ಕಟ್ಟಡ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಾಳೆ ರಾಜ್ಯಾದ್ಯಂತ ನಡೆಯುವ ಪ್ರತಿಭಟನ ಧರಣಿಯ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿಯ ಎದುರು ಪ್ರತಿಭಟನಾ ಧರಣಿ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ. ಶೈಕ್ಷಣಿಕ ಧನ ಸಹಾಯಕ್ಕಾಗಿ ಅರ್ಜಿ ಸಲ್ಲಿಸಲು ಆಗುತ್ತಿರುವ ತೊಂದರೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಯಲಿದೆ.