ಉಡುಪಿ, ಮಾ 30(DaijiworldNews/MS): ಉಡುಪಿ ನಗರಸಭಾ ವ್ಯಾಪ್ತಿಗೆ ನೀರು ಸರಬರಾಜು ಮಾಡುವ ಸ್ವರ್ಣಾ ನದಿಯ ಬಜೆ ಡ್ಯಾಂನಲ್ಲಿ ನೀರಿನ ಸಂಗ್ರಹ ಅತೀ ಕಡಿಮೆಯಾಗುತ್ತಿದ್ದು, ಪ್ರಸ್ತುತ ಕುಡಿಯುವ ನೀರಿನ ಬೇಡಿಕೆ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆ, ಉಡುಪಿ ನಗರಸಭೆಯಿಂದಕುಡಿಯುವ ನೀರಿನ ಸಂಪರ್ಕ ಪಡೆದಿರುವ ಸಾರ್ವಜನಿಕರು ಕುಡಿಯುವ ನೀರನ್ನುಅನ್ಯ ಉದ್ದೇಶಗಳಾದ ವಾಹನ ತೊಳೆಯಲು, ಗಿಡಗಳಿಗೆ ನೀರು ಬಿಡಲು ಬಳಸಿದ್ದು, ಕಂಡುಬಂದಲ್ಲಿ ಸದರಿಯವರ ನೀರಿನ ಸಂಪರ್ಕವನ್ನುಯಾವುದೇ ಮುನ್ಸೂಚನೆ ನೀಡದೇ ಕಡಿತಗೊಳಿಸಿ, ದಂಡ ವಿಧಿಸಲಾಗುವುದು.
ನೀರನ್ನು ಮಿತವಾಗಿ ಬಳಸಲು ಆದ್ಯತೆ ನೀಡಿ, ನೀರಿನ ಅಭಾವ ಇರುವ ಈ ಸಮಯದಲ್ಲಿ ನಗರಸಭೆಯೊಂದಿಗೆ ಸಹಕರಿಸುವಂತೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.