ಮಂಗಳೂರು, ಮಾ 31 (DaijiworldNews/DB): ಪುತ್ತೂರಿನ ಪುರಭವನದಲ್ಲಿ ಚುನಾವಣಾ ಪೂರ್ವ ಸಿದ್ಧತೆಗಳ ಬಗ್ಗೆ ತರಬೇತಿ ಮಾರ್ಚ್ 31ರ ಶುಕ್ರವಾರ ನಡೆಯಿತು.
ಮಾದರಿ ನೀತಿ ಸಂಹಿತೆಯ ನೋಡಲ್ ಅಧಿಕಾರಿಗಳೂ ಆಗಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ತರಬೇತಿ ನೀಡಿದರು.
ಪುತ್ತೂರು ಸಹಾಯಕ ಆಯುಕ್ತ ಗಿರೀಶ್ ನಂದನ್, ಚುನಾವಣಾ ಅಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಚುನಾವಣಾ ಸಿಬ್ಬಂದಿ ಉಪಸ್ಥಿತರಿದ್ದರು.
ಬಳಿಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಬೆಳ್ತಂಗಡಿ ಹಾಗೂ ಸುಳ್ಯದಲ್ಲೂ ಚುನಾವಣಾ ಪೂರ್ವ ಸಿದ್ಧತೆಗಳ ಬಗ್ಗೆ ಚುನಾವಣಾಧಿಕಾರಿಗಳು ಹಾಗೂ ಅಧಿಕಾರಿಗಳ ಸಿಬ್ಬಂದಿಗೆ ತರಬೇತಿ ನೀಡಿದರು.