ಮಂಗಳೂರು, ಏ 02 (DaijiworldNews/MS): ನಗರದ ಖಾಸಗಿ ವೈದ್ಯಕೀಯ ಕಾಲೇಜಿನ ಹೆಸರಿನಲ್ಲಿ ಮೆಡಿಕಲ್ ಸೀಟು ಕೊಡಿಸುವುದಾಗಿ ಹೇಳಿ ಮೋಸ ಮಾಡಿದ್ದ ಪ್ರಕರಣದಲ್ಲಿ ಆರೋಪಿ ನೋಯ್ಡಾ ಮೂಲದ ಆರೋಪಿಯನ್ನು ಮಹಾರಾಷ್ಟ್ರದ ಪೊಲೀಸರು ಮುಂಬೈನ ನೆರೋಲ್ ನಲಲ್ಲಿ ಬಂಧಿಸಿ ಉಳ್ಳಾಲ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.
ಬಂಧಿತನನ್ನು ಇಫ್ತಿಕರ್ ಅಹ್ಮದ್ (31) ಉತ್ತರ ಪ್ರದೇಶದ ನೋಯ್ಡಾ ನಿವಾಸಿಯೆಂದು ಗುರುತಿಸಲಾಗಿದೆ.
ಬೀದರ್ ಮೂಲದ ವ್ಯಕ್ತಿಯೋರ್ವರು, ತಮ್ಮಿಂದ 22.5 ಲಕ್ಷ ರೂ. ಪಡೆದು ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಸೀಟು ದೊರಕಿಸುವುದಾಗಿ ನಂಬಿಸಿ ಇಫ್ತಿಕರ್ ಅಹ್ಮದ್ ಹಾಗೂ ಮತ್ತಿತರರು ಸೇರಿ
ಮೋಸ ಮಾಡಿದ್ದಾಗಿ ಉಳ್ಳಾಲ ಠಾಣೆಗೆ ದೂರು ನೀಡಿದ್ದರು .
ಮಾರ್ಚ್ 5ರಂದು ಉಳ್ಳಾಲ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.ಇದೀಗ ಉಳ್ಳಾಲ ಪೊಲೀಸರು ಆರೋಪಿ ಇಫ್ತಿಕರ್ ಅಹ್ಮದ್ ನನ್ನು ಬಾಡಿ ವಾರೆಂಟ್ ಪಡೆದು ಮುಂಬೈನಿಂದ ಮಂಗಳೂರಿಗೆ ಕರೆ ತಂದಿದ್ದಾರೆ. ಈತ ದೇಶಾದ್ಯಂತ ಮೆಡಿಕಲ್ ಸೀಟು ಲಾಬಿಯ ನೆಪದಲ್ಲಿ ಅಭ್ಯರ್ಥಿಗಳನ್ನು ಸಂಪರ್ಕಿಸಿ, ಏಜೆನ್ಸಿ ಹೆಸರಲ್ಲಿ ಮೋಸ ಮಾಡಿರುವುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.