ಪುತ್ತೂರು, ಏ.05 (DaijiworldNews/SM): ಬಿಜೆಪಿಯ ಶಾಸಕರೊಂದಿಗೆ ಮಹಿಳೆಯ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಸಂತ್ರಸ್ತ ಮಹಿಳೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
34 ನೆಕ್ಕಿಲಾಡಿಯ ನಿವಾಸಿಯಾಗಿರುವ ಈ ಮಹಿಳೆಯು ನನ್ನ ಪೋಟೋದೊಂದಿಗೆ ಬೇರೆಯವರೊಬ್ಬರ ಪೋಟೋವನ್ನು ವಿಭಿನ್ನ ರೀತಿಯಲ್ಲಿ ಜೋಡಿಸಿ, ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಇಲ್ಲಿ ಅಸಹ್ಯ ಹಾಗೂ ಅಶ್ಲೀಲವಾಗಿ ನನ್ನನ್ನು ಬಿಂಬಿಸಿ ಸಾಮಾಜಿಕ ಜಾಲತಾಣದಲ್ಲಿ ಹಾಕುವ ಮೂಲಕ ನನ್ನ ಘನತೆಗೆ ಕುಂದುಂಟುಮಾಡುವ ಕಾರ್ಯ ನಡೆದಿದೆ. ಆದ್ದರಿಂದ ಈ ರೀತಿ ಮಾಡಿರುವ ಅಪರಿಚಿತ ವ್ಯಕ್ತಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ಈ ಪ್ರಕರಣವು ಪುತ್ತೂರು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದು, ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿಗೆ ಇದು ನುಂಗಲಾರದ ತುತ್ತಾಗುವ ಸಾಧ್ಯತೆ ಇದೆ ಎಂದು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.