ಪುತ್ತೂರು, ಏ 07 (DaijiworldNews/HR): ಪುತ್ತೂರು ವಿಭಾಗದ ಕೆ.ಎಸ್.ಆರ್.ಟಿ.ಸಿ. ಉದ್ಯೋಗಿಯೋರ್ವರ ಮೃತದೇಹ ಕಾಣಿಯೂರು ರೈಲ್ವೆ ಟ್ರ್ಯಾಕ್ ನಲ್ಲಿ ಎ.6ರಂದು ಮಧ್ಯರಾತ್ರಿ ಪತ್ತೆಯಾಗಿದೆ.
ಮೃತ ದೇಹವನ್ನು ಬೆಳಂದೂರು ಗ್ರಾಮದ ಕುಸುಮಾಧರ ಗೌಡ ಅಭೀರ(34) ಎಂಬವರದ್ದು ಎಂದು ಗುರುತಿಸಲಾಗಿದೆ.
ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿರಬಹುದು ಎಂದು ಶಂಕೆ ವ್ಯಕ್ತವಾಗಿದ್ದು, ಇವರು ಸುಮಾರು 9ವರ್ಷಗಳಿಂದ ಕೆ.ಎಸ್.ಆರ್.ಟಿ.ಸಿ ಉದ್ಯೋಗಿಯಾಗಿದ್ದು, ಡ್ರೈವರ್ ಕಮ್ ಕಂಡಕ್ಟರ್ ಆಗಿ ಕೆಲಸ ನಿರ್ವಹಿಸುತ್ರಿದ್ದರು.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821