ಮಂಗಳೂರು, ಏ 10 (DaijiworldNews/HR): ಗಾಂಜಾ ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಲ್ಪೆ ನಿವಾಸಿ ಸುಹಾನ್ ಎಸ್ ಪೂಜಾರಿ (23) ಎಂದು ಗುರುತಿಸಲಾಗಿದೆ.
ಸುಹಾನ್ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರಕಡ್ಡದ ಪಡುಶೆಡ್ಡೆ ಬಳಿ ರಸ್ತೆ ಬದಿಯಲ್ಲಿ ಸ್ಕೂಟರ್ನಲ್ಲಿ ಕುಳಿತು ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ.
ಆತನಿಂದ 1.999 ಕೆಜಿ ಗಾಂಜಾ, ಮೊಬೈಲ್ ಮತ್ತು ಸ್ಕೂಟರ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.