ಮಂಗಳೂರು, ಏ 11(DaijiworldNews/SM): ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ವೇಳೆ ಬಿಜೆಪಿ ತನ್ನ ಮೊದಲ ಪಟ್ಟಿ ಬಿಡುಗಡೆಗೊಳಿಸಿದ್ದು, ಸಚಿವ ಎಸ್. ಅಂಗಾರ ಅವರನ್ನು ಹಾಗೂ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರನ್ನು ಕೈ ಬಿಡಲಾಗಿದ್ದು, ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ.
ಸುಳ್ಯದಿಂದ ಭಾಗಿರಥಿ ಹಾಗೂ ಪುತ್ತೂರು ಕ್ಷೇತ್ರದಿಂದ ಆಶಾ ತಿಮ್ಮಪ್ಪಗೆ ಮಣೆ ಹಾಕಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದ್ದಾರೆ.