ಮಂಗಳೂರು, ಏ 13(DaijiworldNews/MS): ನಂಬರ್ ಪ್ಲೇಟ್ ಅಳವಡಿಸದ, ನಂಬರ್ ಪ್ಲೇಟ್ ನಿಯಮ ಮೀರಿದ ವಾಹನಗಳ ವಿರುದ್ದ ನಗರದಾದ್ಯಂತ ಮಂಗಳೂರು ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ.
ಕಾರ್ಯಾಚರಣೆ ವೇಳೆ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಪ್ಯಾನ್ಸಿ ನಮ್ಬರ್ ಪ್ಲೇಟ್, ಅಸಮರ್ಪಕ ನಂಬರ್ ಪ್ಲೇಟ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸುಮಾರು 87 ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಜೈನ್ ತಿಳಿಸಿದ್ದಾರೆ.
ನಿಯಮಗಳ ಪ್ರಕಾರವೇ ನೋಂದಣಿ ಫಲಕಗಳಲ್ಲಿ ನಿಗದಿತ ಅಳತೆಯ ಅಕ್ಷರಗಳು ಮತ್ತು ಅಂಕಿಗಳನ್ನು ಬರೆಸುವುದು ಕಡ್ಡಾಯವಾಗಿದೆ. ಆದರೆ, ಕೆಲವರು ನಂಬರ್ ಪ್ಲೇಟ್ಗಳಲ್ಲಿ ಮನಸೋ ಇಚ್ಛೆ ಸಂಘ-ಸಂಸ್ಥೆಗಳ ಹೆಸರು, ಲಾಂಛನ, ಚಿಹ್ನೆಗಳನ್ನು ಹಾಕಿಕೊಂಡು ನಿಯಮ ಉಲ್ಲಂಘಿಸುತ್ತಿದ್ದು, ಇಂತಹ ವಾಹನ ಮಾಲೀಕ ವಿರುದ್ದ ವಿಶೇಷ ಕಾರ್ಯಾಚರಣೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತಿದೆ.