ಕುಂದಾಪುರ,ಏ 13(DaijiworldNews/MS): ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ ಎ.13ರಂದು ಕುಂದಾಪುರದ ಚುನಾವಣಾಧಿಕಾರಿಗಳ ಕಛೇರಿಯಲ್ಲಿ ಚುನಾವಣಾಧಿಕಾರಿ ರಶ್ಮಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕಿರಣ್ ಕುಮಾರ್ ಕೊಡ್ಗಿ, ಕ್ಷೇತ್ರ ಬಿಜೆಪಿಗೆ ಪೂರಕವಾದ ವಾತಾವರಣವಿದೆ. ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟರ ಪ್ರಭಾವೂ ಕ್ಷೇತ್ರದಲ್ಲಿದೆ. ಅವರು ಸ್ವ ಇಚ್ಛೆಯಿಂದ ಸ್ಪರ್ಧೆ ಮಾಡಲು ನಿರಾಕರಿಸಿದ್ದರು. ಹಾಗಾಗಿ ಪಕ್ಷ ನನಗೆ ಟಿಕೆಟು ನೀಡಿದೆ. ಹಿಂದಿನ ಚುನಾವಣೆಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡಿದ್ದೇನೆ. ಕ್ಷೇತ್ರದ ಸಂಪೂರ್ಣ ಅರಿವಿದೆ. ಕ್ಷೇತ್ರದ ಮತದಾರರನ್ನು ನನ್ನನ್ನು ಬೆಂಬಲಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಕುಂದಾಪುರ ಮಂಡಲದ ಅಧ್ಯಕ್ಷ ಶಂಕರ ಅಂಕದಕಟ್ಟೆ, ಮಾಜಿ ಅಧ್ಯಕ್ಷ ಸುರೇಶ ಶೆಟ್ಟಿ ಕಾಡೂರು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.ತಹಶೀಲ್ದಾರ್ ಶೋಭಾಲಕ್ಷ್ಮೀ ಹಾಜರಿದ್ದರು.