ಮಂಗಳೂರು, ಏ 15 (DaijiworldNews/HR): 2018ರಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಲವು ಅಪರಾಧ ಪ್ರಕರಣಗಳ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮೈಸೂರು ನಿವಾಸಿ ಆನಂದ (28) ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಆತನ ವಿರುದ್ದ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಕಲಂ 365, 395, 326, 506 ಮತ್ತು 324 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಈತನು ಬಯಲುಕೊಪ್ಪ ಪೊಲೀಸ್ ಠಾಣೆಯಲ್ಲಿ ಎ ಒನ್ ರೌಡಿಯಾಗಿದ್ದು ಈತನ ವಿರುದ್ಧ ಬೈಲುಕೊಪ್ಪ, ಹಾಸನ, ಬೆಟ್ಟದಹಳ್ಳಿ, ಮಂಗಳೂರು ಪೂರ್ವ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದೆ.