ಉಡುಪಿ, ಏ 15 (DaijiworldNews/MS): ಕಾಪು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಯವರು ಏ. 17 ರಂದು ಕಾಪುವಿನಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಎಪ್ರಿಲ್ 17 ರಂದ ಕಾಪುವಿನ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಆ ಬಳಿಕ ಪಾದಾಯಾತ್ರೆಯ ಮೂಲಕ ಕಾಪು ಆಡಳಿತ ಸೌಧಕ್ಕೆ ತೆರಳಿ ನಾಮಪತ್ರ ಸಲ್ಲಿಸಲಿದ್ದೇನೆ ಎಂದವರು ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು “ನಾಮಪತ್ರ ಸಲ್ಲಿಕೆಯ ಸಂಧರ್ಭದಲ್ಲಿ ತಮಿಳುನಾಡು ಬಿಜೆಪಿ ಅಧ್ಯಕ್ಚರಾದ ಅಣ್ಣಾಮಲೈ, ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಉಡುಪಿ ಶಾಸಕ ರಘುಪತಿ ಭಟ್, ಉಡುಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಮತ್ತು ಇತರ ಗಣ್ಯರು ಉಪಸ್ಥಿತರಿರುವರು. ಸುಮಾರು 20 ಸಾವಿರ ಮಂದಿ ಈ ಪಾದಾಯಾತ್ರೆಯಲ್ಲಿ ಭಾಗವಹಿಸುವರು. ಶಾಸಕ ಲಾಲಾಜಿ ಮೆಂಡನ್ ಮತ್ತು ಪ್ರಧಾನ ಮಂತ್ರಿ ಮೋದಿಯವರ ಅಭಿವೃದ್ದಿಯೇ ನನಗೆ ಶ್ರೀ ರಕ್ಷೆಯಾಗಿದ್ದು ದೊಡ್ಡ ಅಂತರದಿಂದ ಗೆಲ್ಲುವ ವಿಶ್ವಾಸವಿದೆ” ಎಂದರು.
ಈ ಸಂಧರ್ಭದಲ್ಲಿ ಶಾಸಕ ಲಾಲಾಜಿ ಮೆಂಡನ್, ಕರಾವಳಿ ಅಭೀವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರ್ ರತ್ನಕರ್ ಹೆಗ್ಡೆ,. ಕಾಫು ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ದೆಹಲಿ ಶಾಸಕರಾದ ವಿಜಯ್ ಗುಪ್ತ, ಮುಖಂಡರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗಂಗಾಧರ್ ಸುವರ್ಣ, ಶಿಲ್ಪಾ ಸುವರ್ಣ, ಗೀತಾಂಜಲಿ ಸುವರ್ಣ ಉಪಸ್ಥಿತರಿದ್ದರು.