ಬಂಟ್ವಾಳ, ಏ17 (DaiiworldNews/HR): ಎರಡು ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿಯಾದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಲೊರೆಟ್ಟೋ ಎಂಬಲ್ಲಿ ನಡೆದಿದೆ.

ಬಿಸಿರೋಡಿಗೆ ಬರುತ್ತಿದ್ದ ಇ.ವಿ.ಕಾರು ಹಾಗೂ ಅಂಬಾಸಿಡರ್ ಕಾರುಗಳ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ.
ಇನ್ನು ಢಿಕ್ಕಿಯ ರಭಸಕ್ಕೆ ಎರಡು ಕಾರುಗಳ ಮುಂಭಾಗ ಜಖಂಗೊಂಡಿದೆ. ಆದರೆ ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಗಾಯವಿಲ್ಲದೆ ಪಾರಾಗಿದ್ದಾರೆ.