ಉಡುಪಿ, ಏ 17 (DaijiworldNews/MS): ಕಾಂಗ್ರೆಸ್ ಮುಖಂಡ ಕಿಶನ್ ಹೆಗ್ಡೆ ಕೊಳ್ಕೆಬೈಲು ಇವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ನ ಕಾರ್ಯಾಧ್ಯಕ್ಷರಾಗಿ ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಉಡುಪಿ ಕಾಂಗ್ರೆಸ್ ನ ಮುಖಂಡರಾಗಿರುವ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರು ಈ ಬಾರಿಯ ವಿಧಾನಸಭಾ ಚುನಾವಣೆಯ ಕುಂದಾಪುರ ಕ್ಷೇತ್ರದ ಟಿಕಟ್ ಆಕಾಂಕ್ಷಿ ಕೂಡಾ ಆಗಿದ್ದರು.
ತಕ್ಷಣವೇ ಜವಾಬ್ದಾರಿ ವಹಿಸಿಕೊಂಡು ಕೆಪಿಸಿಸಿ ಮತ್ತು ಜಿಲ್ಲಾ ಕಾಂಗ್ರೆಸ್ ಮತ್ತು ಸ್ಥಳೀಯ ನಾಯಕರ ಮಾರ್ಗದರ್ಶನದಲ್ಲಿ ಕೆಲಸ ಕಾರ್ಯಗಳನ್ನು ಪ್ರಾರಂಭಿಸಲು ಆದೇಶದಲ್ಲಿ ಸೂಚನೆ ನೀಡಲಾಗಿದೆ.