ಮಂಗಳೂರು, ಏ 18 (DaijiworldNews/HR): ಬಿಜೆಪಿ ಪಕ್ಷ ಮಾತ್ರ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡುತ್ತದೆ. ಬೇರೆ ಯಾವ ಪಾರ್ಟಿಗೆ ಆ ತಾಕತ್ತಿಲ್ಲ, ಇದ್ದರೆ ಘೋಷಣೆ ಮಾಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸವಾಲು ಹಾಕಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಲಿಂಗಾಯತರನ್ನು ಸಿಎಂ ಅಭ್ಯರ್ಥಿಯಾಗಿ ಘೋಷಣೆ ಮಾಡಲಿ. ಕಾಂಗ್ರೆಸ್ ಗೆ ಬಹಳ ಕ್ಷೇತ್ರದಲ್ಲಿ ಅಭ್ಯರ್ಥಿ ಕೊರತೆ ಇದೆ. ಡಿಸೆಂಬರ್ ನಲ್ಲೇ ಅವರು ಆಯ್ಕೆ ಪ್ರಕ್ರಿಯೆ ಆರಂಭಿಸಿದರೂ ಈವರೆಗೆ ಆಗಿಲ್ಲ. ನಾವು ಹತ್ತು ದಿವಸದಲ್ಲಿ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಮುಗಿಸಿದ್ದೇವೆ ಎಂದರು.
ಬಿ.ಎಲ್.ಸಂತೋಷ್ ವಿರುದ್ದ ಜಗದೀಶ್ ಶೆಟ್ಟರ್ ಹೇಳಿಕೆ ವಿಚಾರದಲ್ಲಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಹಿರಿಯರ ಮನವೊಲಿಕೆ ನಂತರವೂ ಬಿಜೆಪಿ ಬಿಟ್ಟಿದ್ದಾರೆ. ಕೊನೆಯ ತನಕ ಪ್ರಯತ್ನ ಆಗಿದೆ, ರಾಷ್ಟ್ರೀಯ ನಾಯಕರು ಮನೆ ಬಾಗಿಲಿಗೆ ಹೋದರೂ ಗೌರವ ಕೊಡದೇ ಹೋಗಿದ್ದಾರೆ ಎಂದು ಹೇಳಿದ್ದಾರೆ.
ಪುತ್ತೂರಿನಲ್ಲಿ ಬಿಜೆಪಿ ವಿರುದ್ದ ಹಿಂದೂ ಮುಖಂಡ ಅರುಣ್ ಪುತ್ತಿಲ ಬಂಡಾಯ ವಿಚಾರದಲ್ಲಿ ಮಾತನಾಡಿದ ನಳಿನ್, ಪ್ರಜಾಪ್ರಭುತ್ವದಲ್ಲಿ ಯಾರೂ ಬೇಕಾದ್ರೂ ಚುನಾವಣೆಗೆ ಸ್ಪರ್ಧೆ ಮಾಡಬಹುದು. ಅವರ ಆಪೇಕ್ಷೆ ಈಡೇರಾದಾಗ ನಾಮಪತ್ರ ಸಲ್ಲಿಸ್ತಾರೆ. ಆದರೆ ಪುತ್ತೂರು ಬಿಜೆಪಿ ಭದ್ರಕೋಟೆ, ಇಲ್ಲಿ ಬಿಜೆಪಿ ಜಯ ಸಾಧಿಸುತ್ತೆ ಎಂದು ಹೇಳಿದ್ದಾರೆ.