ಉಡುಪಿ, ಏ 18 (DaijiworldNews/HR): ಉಡುಪಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶಪಾಲ್ ಸುವರ್ಣ ಅವರು ಏಪ್ರಿಲ್ 20 ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಉಡುಪಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ರಿಲ್ 20 ರಂದು ನಾಮಪತ್ರ ಸಲ್ಲಿಸಲಿದ್ದೇನೆ, ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಿಂದ ಉಡುಪಿ ತಾಲೂಕು ಕಚೇರಿವರೆಗೆ ಬೃಹತ್ ರ್ಯಾಲಿ ಆಯೋಜಿಸಲಾಗಿದ್ದು, 15 ಸಾವಿರಕ್ಕೂ ಹೆಚ್ಚು ಪಕ್ಷದ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಕೇಂದ್ರದ ಮೋದಿ ಸರಕಾರ ಹಾಗೂ ರಾಜ್ಯದ ಬೊಮ್ಮಾಯಿ ಹಾಗೂ ಯಡಿಯೂರಪ್ಪ ಸರಕಾರದ ಅಭಿವೃದ್ಧಿ ಕಾರ್ಯಗಳು ಹಾಗೂ ಉಡುಪಿಯಲ್ಲಿ ನಮ್ಮ ಶಾಸಕ ರಘುಪತಿ ಭಟ್ ಅವರು ಮಾಡಿರುವ ಅಭಿವೃದ್ದಿ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಪುಣ್ಯವಾಗಿದೆ. ರಾಜ್ಯ ಮತ್ತು ರಾಷ್ಟ್ರ ಮಟ್ಟದ ನಾಯಕರು ಜೊತೆಗಿರುತ್ತಾರೆ ಎಂದರು.
ಎಸ್ಡಿಪಿಐ ಮತ್ತು ಕಾಂಗ್ರೆಸ್ ಎರಡೂ ಒಂದೇ ನಾಣ್ಯದ ಎರಡು ಮುಖಗಳು, ಜನರು ಬುದ್ಧಿವಂತರು ಮತ್ತು ಅವರು ತಮ್ಮ ಅಭ್ಯರ್ಥಿಯನ್ನು ಸರಿಯಾದ ರೀತಿಯಲ್ಲಿ ಆಯ್ಕೆ ಮಾಡುತ್ತಾರೆ, ನಾನು ಸರಳ ಪಕ್ಷದ ಕಾರ್ಯಕರ್ತ, ಪಕ್ಷವು ನನಗೆ ಉಡುಪಿ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ನೀಡಿದ್ದು ಸರಿಯಾಗಿ ನಿಭಾಯಿಸುತ್ತೇನೆ ಎಂದಿದ್ದಾರೆ.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಉಡುಪಿ ಶಾಸಕ ರಘುಪತಿ ಭಟ್ ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.