ಬಂಟ್ವಾಳ, ಏ.20 (DaijiworldNews/SM): ವಿಧಾನಸಭೆಯ ಬಂಟ್ವಾಳ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಏ.20ರ ಗುರುವಾರ ಒಟ್ಟು 5 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಒಟ್ಟು 8 ನಾಮಪತ್ರಗಳು ಸಲ್ಲಿಕೆಯಾದಂತಾಗಿದೆ.
ಇದುವರೆಗೆ ಬಿಜೆಪಿಯ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಎಸ್.ಡಿ.ಪಿ.ಐ.ನಿಂದ ಇಲ್ಯಾಸ್ ತುಂಬೆ, ಮಜೀದ್ ಅವರು ನಾಮಪತ್ರ ಸಲ್ಲಿಸಿದ್ದರು. ಇದೀಗ ಗುರುವಾರ ಒಂದೇ ದಿನ 5 ನಾಮಪತ್ರಗಳು ಸಲ್ಲಿಕೆಯಾಗಿವೆ. ಕಾಂಗ್ರೆಸ್ ನಿಂದ ಬಿ.ರಮಾನಾಥ ರೈ,
ಜಾತ್ಯತೀತ ಜನತಾದಳದಿಂದ ಪ್ರಕಾಶ್ ರಫಾಯಲ್ ಗೋಮ್ಸ್, ಆಮ್ ಆದ್ಮಿ ಪಾರ್ಟಿಯಿಂದ ಪುರುಷೋತ್ತಮ, ಉತ್ತಮ ಪ್ರಜಾಕೀಯ ಪಕ್ಷದಿಂದ ಅನೀಶ್ ಶೆಟ್ಟಿ, ಪಕ್ಷೇತರ ಅಭ್ಯರ್ಥಿಯಾಗಿ ಬಿ.ಟಿ.ಕುಮಾರ್ ನಾಮಪತ್ರ ಸಲ್ಲಿಸಿರುತ್ತಾರೆ ಎಂದು ಚುನಾವಣಾದಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.