ಕುಂದಾಪುರ, ಏ 21 (DaijiworldNews/MS): ಪುತ್ತೂರಿನಲ್ಲಿ ಅರುಣ್ ಪುತ್ತಿಲರ ಬಂಡಾಯ ಪಕ್ಷಕ್ಕೆ ಹಾನಿ ಮಾಡದು. ಅಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪರವರು ಜಯಭೇರಿ ಬಾರಿಸುತ್ತಾರೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಬೈಂದೂರಿನ ಬಿಜೆಪಿ ಕಚೇರಿಯಲ್ಲಿ ನಡೆಸಲಾದ ಸುದ್ಧಿಗೋಷ್ಟಿಯಲ್ಲಿ ಅವರು ಮಾತನಾಡಿದರು.
ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿ ಪಿಎಫ್ ಐ ಪಕ್ಷದಿಂದ ಶಫಿ ಬೆಳ್ಳಾರೆ ಜೈಲಿನಲ್ಲಿದ್ದುಕೊಂಢೇ ಸ್ಪರ್ಧೆ ಮಾಡುತ್ತಿದ್ದಾರೆ. ಆದುದರಿಂದ ಇದು ಹಿಂದೂಗಳ ಅಸ್ತಿತ್ವದ ಪ್ರಶ್ನೆಯಾಗಿದೆ. ಸಿದ್ಧಾಂತ ಮತ್ತು ಸಂಘಟನೆ ಎರಡೇ ಚುನಾವಣೆಯಲ್ಲಿ ಪಾತ್ರ ವಹಿಸುತ್ತವೆ. ನಮ್ಮಲ್ಲಿ ವ್ಯಕ್ತಿಗಿಂತ ಪಕ್ಷ, ಪಕ್ಷಕ್ಕಿಂತ ದೇಶ ಮುಖ್ಯವಾಗಿರುವುದರಿಂದ ಕಾಂಗ್ರೆಸ್ ಆಗಲಿ, ಪಿಎಫ್ ಐ ಆಗಲಿ ಅಥವಾ ಅರುಣ್ ಪುತ್ತಿಲರಾಗಲು ಗೆಲ್ಲುವುದಿಲ್ಲ ಎಂದರು
ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರ ಪಡೆಯಲಿದೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳು ಜನಸಾಮಾನ್ಯರ ಮನಸ್ಸಿನಲ್ಲಿದೆ. ಯುವಕರ, ದಮನಿತ ರ ದ್ವನಿಯಾಗಿ ಸಂಘದ ಒಬ್ಬ ಸಾಮಾನ್ಯ ಕಾರ್ಯಕರ್ತ ಗುರುರಾಜ ಗಂಟಿಹೊಳೆಯವರಿಗೆ ಪಕ್ಷ ಅವಕಾಶ ನೀಡಿದೆ. ಇದು ಕಾರ್ಯಕರ್ತರ ಗೆಲುವಾಗಬೇಕು. ಬೈಂದೂರು ಸೇರಿದಂತೆ ರಾಜ್ಯದಲ್ಲಿ ಬಿಜೆಪಿ ನಿಶ್ಚಿತವಾದ ಬಹುಮತ ಗಳಿಸಲಿದೆ. ಕಾರ್ಯಕರ್ತರು ಸಮರ್ಪಣಾ ಭಾವದಿಂದ ಕೆಲಸ ನಿರ್ವಹಿಸಬೇಕು ಎಂದು ರಾಜ್ಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿದರು.
ಬಹುತೇಕ ಹೊಸ ಅಭ್ಯರ್ಥಿಗಳಿಗೆ ಬಿಜೆಪಿ ಅವಕಾಶ ನೀಡಿದೆ. ಮರವಂತೆ ಮೀನುಗಾರರ ಚುನಾವಣೆ ಬಹಿಷ್ಕಾರ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಹಾಗೂ ರಾಜ್ಯ ಸರಕಾರ ಮೀನುಗಾರರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ.ಕರಾವಳಿ ಭಾಗದ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗಿದೆ.ಮೀನುಗಾರರ ವಿಶ್ವಾಸದೊಂದಿಗೆ ಬಿಜೆಪಿ ಭರವಸೆ ಈಡೇರಿಸಲಿದೆ ಎಂದರು.