ಮಂಗಳೂರು, ಮಾ25(SS): ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಆಭ್ಯರ್ಥಿ ನಳಿನ್ ಕುಮಾರ್ ಕಟೀಲ್, ಬಿಜೆಪಿ ಮುಖಂಡರು ಹಾಗೂ ಬೆಂಬಲಿಗರೊಂದಿಗೆ ತೆರಳಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಕಾರ್ಕಳ ಶಾಸಕ ಸುನಿಲ್ ಕುಮಾರ್ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಆಭ್ಯರ್ಥಿ ಬಜರಂಗದಳ ನಿಷೇಧ ಮಾಡುತ್ತೇನೆ ಎಂದು ಹೇಳಿದ್ದಾರೆ. ಯಾವ ಕಾಂಗ್ರೆಸ್ ನಾಯಕರರಿಗೂ ಸಂಘಟನೆಗಳನ್ನು ನಿಷೇಧ ಮಾಡಲು ಸಾಧ್ಯವಾಗಿಲ್ಲ. ಆ ಬಚ್ಚಾ ರಾಜಕಾರಣಿಯಿಂದ ನಿಷೇಧಿಸಲು ಸಾಧ್ಯನಾ ಎಂದು ಪ್ರಶ್ನಿಸಿದ್ದಾರೆ.
ಚುನಾವಣೆಯಲ್ಲಿ ಬಿಜೆಪಿ ವಿಜಯದ ಬಳಿಕ ಗ್ರಾಮ ಗ್ರಾಮದಲ್ಲಿ ಬಜರಂಗದಳ ಶಾಖೆ ಆರಂಭಿಸಲಾಗುವುದು. ಬಜರಂಗದಳ ಶಾಖೆ ತೆರೆದು ಸಂಘಟನೆಗಳನ್ನು ಬಲಿಷ್ಠ ಮಾಡಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಕಾರ್ಕಳ ಶಾಸಕ ಸುನೀಲ್ ಕುಮಾರ್, ಪುತ್ತೂರು ಶಾಸಕ ಸಂಜೀವ ಮಠಂದೂರು, ಪುರುಷೋತ್ತಮ ಭಟ್ ಉಪಸ್ಥಿತರಿದ್ದರು.