ಬಂಟ್ವಾಳ, ಏ 23 (DaijiworldNews/HR): ಬೆಂಗಳೂರಿಗೆ ಎಂದು ಮನೆಯಿಂದ ಹೊರಟು ಹೋದ ಯುವಕನ ಮೃತದೇಹ ಮಂಗಳೂರಿನ ಪಣಂಬೂರಿನಲ್ಲಿ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಎಡೆ ಮಾಡಿದೆ.
ಬಂಟ್ವಾಳ ಮೊಡಂಕಾಪು ನಿವಾಸಿ ಉಷಾ ಎಂಬವರ ಮಗ ವಿನಯ್ (25) ಮೃತಪಟ್ಟ ಯುವಕ.
ಮಂಗಳೂರಿನ ಪಣಂಬೂರು ಬೀಚ್ ನ ಬ್ರೇಕ್ ವಾಟರ್ ಬಳಿ ಇಂದು ಯುವಕನ ಮೃತದೇಹ ಪತ್ತೆಯಾಗಿದ್ದು, ಪಣಂಬೂರು ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್ನು ವಿನಯ್ ಯಾವ ಕಾರಣದಿಂದ ಮೃತಪಟ್ಟಿದ್ಧಾನೆ ಎಂಬುದು ಸ್ಪಷ್ಟವಾಗಿಲ್ಲ.