ಕಡಬ, ಏ 25 (DaijiworldNews/SM) : ತಾಲೂಕಿನಲ್ಲಿ ಸುರಿದ ಪ್ರಥಮ ಗಾಳಿ ಮಳೆಗೆ ಮೆಸ್ಕಾಂ ಇಲಾಖೆ ತತ್ತರಿಸುವಂತಾಗಿದೆ. ಮಳೆಯ ಆರ್ಭಟಕ್ಕೆ ಮೆಸ್ಕಾಂ ಇಲಾಖೆಗೆ ಸುಮಾರು 15 ರಿಂದ 20 ಲಕ್ಷ ರೂಪಾಯಿ ನಷ್ಟವುಂಟಾಗಿದೆ ಎಂದು ಮೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯದಲ್ಲಿ ಮರ ಮುರಿದು ಬಿದ್ದು ಬಸ್ ತಂಗುದಾಣ, 63ಕೆವಿ ವಿದ್ಯುತ್ ಪರಿವರ್ತಕ ಸೇರಿದಂತೆ ಹಲವಾರು ವಿದ್ಯುತ್ ಕಂಬಗಳು ಧರಶಾಹಿಯಾಗಿದೆ.
ಉದನೆ ಸಮೀಪದ ಕಳಪ್ಪಾರು ಶೆರ್ವತಡ್ಕ ಎಂಬಲ್ಲೂ ವಿದ್ಯುತ್ ಕಂಬಗಳು ತಂತಿಗಳು ನೆಲಕ್ಕುರುಳಿ ಬಿದ್ದಿದೆ ಎನ್ನಲಾಗಿದೆ.
ಕಡಬ, ಅಲಂಕಾರು, ನೆಲ್ಯಾಡಿ, ಬಿಳಿನೆಲೆ ಮೆಸ್ಕಾಂ ವ್ಯಾಪ್ತಿಯಲ್ಲಿ ಅಂದಾಜು 15ರಿಂದ 20 ಲಕ್ಷ ರೂಪಾಯಿಗಳ ನಷ್ಟವುಂಟಾಗಿದೆ ಎಂದು ಕಡಬ ಮೆಸ್ಕಾಂ ಎಇಟಿ ಸಜಿಕುಮಾರ್ ಮಾಹಿತಿ ನೀಡಿದ್ದಾರೆ. ಇನ್ನು, ಮೆಸ್ಕಾಂ ಅಧಿಕಾರಿಗಳು, ಸಿಬ್ಬಂದಿಗಳು ತುರ್ತು ಕೆಲಸಗಳಲ್ಲಿ ನಿರತರಾಗಿದ್ದು, ನಾಳೆ ಸಂಜೆಯೊಳಗಡೆ ಕೆಲಸ ಪೂರ್ಣಗೊಳಿಸುವ ಭರವಸೆ ನೀಡಿದ್ದಾರೆ. ಘಟನೆಯಿಂದಾಗಿ ಸುಮಾರು ಒಂದು ಗಂಟೆಗಳ ಕಾಲ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿತ್ತು.