ಮಂಗಳೂರು, ಏ 29 (DaijiworldNews/MS): ಬಸ್ ಢಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಪ್ರಕರಣದಲ್ಲಿ ಬಸ್ ಚಾಲಕನಿಗೆ ನ್ಯಾಯಾಲಯ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.
ಬಸ್ ಚಾಲಕ ಏಳನೇ ಬ್ಲಾಕ್ ಕೃಷ್ಣಾಪುರ ಕಾಟಿಪಳ್ಳ ನಿವಾಸಿ ಉಸ್ಮಾನ್ (37) ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾದ ಆರೋಪಿ.ಘಟನೆಯಲ್ಲಿ ಸುಂದರ್ ಸಾಲಿಯಾನ್ ಮೃತಪಟ್ಟಿದ್ದರು.
2020ರ ಜನವರಿ 16ರಂದು ಬೆಳಿಗ್ಗೆ 10.30 ರ ಸುಮಾರಿಗೆ ಸುಂದರ ಸಾಲಿಯಾನ್ ಬೈಕಂಪಾಡಿ ಜಂಕ್ಷನ್ನಲ್ಲಿ ಬಸ್ಗಾಗಿ ಕಾಯುತ್ತಿದ್ದರು. ಜೋಕಟ್ಟೆಯಿಂದ ಬಸ್ಸನ್ನು ಅಪಾಯಕಾರಿ ರೀತಿಯಲ್ಲಿ ಚಲಾಯಿಸುತ್ತಿದ್ದ ಉಸ್ಮಾನ್ ರಸ್ತೆಯ ಎಡಬದಿಯಲ್ಲಿ ನಿಂತಿದ್ದ ಸುಂದರ್ ಎಂಬವರಿಗೆ ಡಿಕ್ಕಿ ಹೊಡೆದಿತ್ತು. ಬಸ್ ಅವರ ಮೇಲೆ ಚಲಿಸಿ ಗಂಭೀರ ಗಾಯಗೊಂಡ ಹಿನ್ನಲೆಯಲ್ಲಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರು.
ಈ ಬಗ್ಗೆ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ತನಿಖಾಧಿಕಾರಿ ಮೋಹನ್ ಕೊಟ್ಟಾರಿ ಅವರು ಎರಡನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಂಜಲಿ ಶರ್ಮಾ ಅವರು ಉಸ್ಮಾನ್ಗೆ ಆರು ತಿಂಗಳ ಜೈಲು ಶಿಕ್ಷೆ ಮತ್ತು 6000 ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದರೆ ಉಸ್ಮಾನ್ ಮೂರು ತಿಂಗಳು 10 ದಿನಗಳ ಜೈಲು ಶಿಕ್ಷೆ ಅನುಭವಿಸಬೇಕು.