ವಿಟ್ಲ, ಮಾ 25(SM): ಅಪ್ರಾಪ್ತೆಯ ಮೇಲೆ ಬಾಲಕನೊಬ್ಬ ಅತ್ಯಾಚಾರ ನಡೆಸಿರುವ, ಘಟನೆ ವಿಟ್ಲದಲ್ಲಿ ನಡೆದಿದೆ. ಘಟನೆಯ ಬಳಿಕ ಆರೋಪಿ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಆರೋಪಿಯ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಬಾಲಕಿ ತನ್ನ ಶಿಕ್ಷಣವನ್ನು ಅರ್ಧದಲ್ಲಿಯೇ ಬಿಟ್ಟು ಮನೆಯಲ್ಲಿ ಇದ್ದಳು. ಸುಮಾರು 3 ತಿಂಗಳಿನಿಂದ ದೂರದ ಸಂಬಂಧಿ 17 ವರ್ಷದ ಬಾಲಕ ಆಕೆಯ ಮನೆಗೆ ಬರುತ್ತಿದ್ದ. ಈ ಬಗ್ಗೆ ಮನೆಯವರು ಮನೆಗೆ ಬಾರದಂತೆ ತಿಳಿಸಿದ್ದರು. ಇದರ ಮಧ್ಯ ಆಕೆಯನ್ನು ಮಡಿಕೇರಿಗೆ ಕರೆದುಕೊಂಡು ಹೋಗಿ ಮನೆಯಲ್ಲಿ ಬಿಟ್ಟಿದ್ದ. ಆಕೆಯನ್ನು ಪುಲಾಯಿಸಿ ಒತ್ತಾಯ ಪೂರ್ವಕವಾಗಿ ಬಲಾತ್ಕಾರವಾಗಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಬಾಲಕಿ ಪೋಷಕರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ಮುಂದುವರೆಸಿದ್ದಾರೆ.