ಉಡುಪಿ, ಮೇ 04 (DaijiworldNews/SM) : ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನ ಸಭಾ ಚುನಾವಣೆ 2023 ಹಿನ್ನಲೆಯಲ್ಲಿ ಉಡುಪಿಯಲ್ಲಿ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ಹಾಗೂ ಪೂರ್ವಾನುಮತಿ ಪಡೆಯದೆ ಉತ್ಸವಗಳನ್ನು ನಡೆಸುವುದಕ್ಕೆ ನಿಷೇಧ ಹೇರಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.
ಮೇ 10ರಂದು ಬೆಳಿಗ್ಗೆ 6 ಗಂಟೆಯಿಂದ, ಚುನಾವಣೆ ಮತದಾನ ಮುಕ್ತಾಯವಾಗುವವರೆಗೆ ಉಡುಪಿ ಜಿಲ್ಲೆಯಾದ್ಯಂತ ಸಂತೆ ಮತ್ತು ಎಲ್ಲಾ ತರಹದ ಜಾತ್ರೆಗಳನ್ನು ಹಾಗೂ ಪೂರ್ವಾನುಮತಿ ಪಡೆಯದೆ ಉತ್ಸವಗಳನ್ನು ನಡೆಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.