ಬೆಂಗಳೂರು, ಮೇ 04 (DaijiworldNews/SM): ಬಿಜೆಪಿ ಯುವಮೋರ್ಚಾ ಸದಸ್ಯ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳ ವಿರುದ್ಧ ಎನ್ ಐಎ ಆರೋಪಪಟ್ಟಿ ಸಲ್ಲಿಸಿದೆ.
2022ರ ಜುಲೈ 26ರಂದು ಈಗ ನಿಷೇಧಗೊಂಡಿರುವ ಪಾಪ್ಯುಲರ್ ಫ್ರಂಟ್ ನ ಭಾರತ(ಪಿಎಫ್ಐ) ಕಾರ್ಯಕರ್ತರಿಂದ ಪ್ರವೀಣ್ ನೆಟ್ಟಾರು ಬೆಳ್ಳಾರೆಯಲ್ಲಿ ಅವರ ಅಂಗಡಿಯ ಮುಂದೆ ಹತ್ಯೆಗೀಡಾಗಿದ್ದರು.
ಭಾರತೀಯ ದಂಡ ಸಂಹಿತೆಯ (IPC) ವಿವಿಧ ಸೆಕ್ಷನ್ಗಳ ಅಡಿಯಲ್ಲಿ ತುಫೈಲ್ ಎಂಎಚ್ ಮತ್ತು ಮಹಮ್ಮದ್ ಜಬೀರ್ ಸೇರಿದಂತೆ ಇತರ ಆರೋಪಿಗಳ ವಿರುದ್ಧ ಆರೋಪ ಹೊರಿಸಲಾಗಿದೆ. ಯುಎಪಿಎ ಕಾಯ್ದೆಯಡಿ ಒಟ್ಟು ಈ ಪ್ರಕರಣದಲ್ಲಿ 21 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ಎನ್ಐಎ ತಿಳಿಸಿದೆ. ಕೊಲೆ ನಂತರ ತಲೆಮರೆಸಿಕೊಂಡಿದ್ದ ತುಫೈಲ್ ನನ್ನು ಎನ್ಐಎ ತಂಡ ಬೆಂಗಳೂರಿನಲ್ಲಿ ಪತ್ತೆ ಹಚ್ಚಿ ಬಂಧಿಸಿತ್ತು.