ಕಾಸರಗೋಡು, ಮೇ 08 (DaijiworldNews/MS): ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಜತ್ತೂರಿನಲ್ಲಿ ಸೋಮವಾರ ರಾತ್ರಿ 8 ಗಂಟೆಯವರೆಗೆ ಜಾರಿಗೊಳಿಸಿದ್ದ ನಿಷೇಧಾಜ್ಞೆಯನ್ನು ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣ್ ವೀರ್ ಚಂದ್ ಹಿಂತೆಗೆದುಕೊಂಡಿದ್ದಾರೆ.
ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ಹಾಗೂ ಮಂಜೇಶ್ವರ ಶಾಸಕ ಎ.ಕೆ. ಎಂ ಅಶ್ರಫ್ ರವರ ನಡುವೆ ನಡೆದ ಮಾತುಕತೆ ಬಳಿಕ ಈ ತೀರ್ಮಾನ ತೆಗೆದುಕೊಳ್ಳ ಲಾಗಿದೆ.
ಸ್ಮಶಾನ ಸ್ಥಳ ಹಾಗೂ ರಸ್ತೆ ಸಂಬಂಧ ವಿವಾದದ ಕಾರಣದಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಪರಿಸ್ಥಿತಿ ಅವಲೋಕನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ನಿರ್ದೇಶನ ನೀಡಲಾಗಿದೆ.