ಉಡುಪಿ,ಮಾ26(AZM):ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯ 5 ವಿಧಾನ ಸಭಾ ಕ್ಷೇತ್ರದಲ್ಲಿ ಒಟ್ಟು 1111 ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಆ ಪೈಕಿ 25 ಅತೀ ಸೂಕ್ಷ್ಮ ಮತಗಟ್ಟೆಗಳು ಹಾಗೂ 856 ಸಾಮಾನ್ಯ ಮತಗಟ್ಟೆಗಳು ಇರುತ್ತದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಹೆಪ್ಸಿಬಾ ರಾಣಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ 255 ಅತೀ ಸೂಕ್ಷ್ಮ ಮತಗಟ್ಟೆಗಳಲ್ಲಿ 55 ಬೂತ್ ಗಳು ನಕ್ಸಲ್ ಭಾದಿತ ಮತಗಟ್ಟೆಗಳಾಗಿವೆ. ಇನ್ನು ಜಿಲ್ಲೆಯಲ್ಲಿ 1660 ತೊಂದರೆ ನೀಡಬಹುದಾದ ವ್ಯಕ್ತಿಗಳ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ಈಗಾಗಲೇ 1112 ವ್ಯಕ್ತಿಗಳಿಂದ ಬಾಂಡ್ ಪಡೆದುಕೊಂಡಿರುತ್ತದೆ ಎಂದು ಅವರು ತಿಳಿಸಿದ್ದಾರೆ.
ಅದೇ ರೀತಿ ಉಡುಪಿ ಜಿಲ್ಲೆಯ ೧೭೩೮ ರೌಡಿ ಆಸಾಮಿಗಳ ಪೈಕಿ 1401 ರೌಡಿಗಳ ಮೇಲೆ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, 08 ಜನರನ್ನು ಗಡಿಪಾರು ಮಾಡಲಾಗಿದೆ ಎಂದು ಎಸ್.ಪಿ ನಿಶಾ ಜೇಮ್ಸ್ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಹೆಪ್ಸಿಬಾ ರಾಣಿ ಉಪಸ್ಥಿತರಿದ್ದರು.