ಮಂಗಳೂರು, ಮೇ 09 (DaijiworldNews/SM): ರಾಜ್ಯ ವಿಧಾನಸಭೆಗೆ ಮೇ 10ರಂದು ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯುವ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಜಾತ್ರೆ ಸಂತೆಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರವಿಕುಮಾರ್ ತಿಳಿಸಿದ್ದಾರೆ.
ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ, ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮತ್ತು ಮತದಾನದ ಪಾವಿತ್ಯತೆ ಕಾಪಾಡುವ ಹಿತದೃಷ್ಟಿಯಿಂದ ಮೇ 10ರಂದು ಜಿಲ್ಲೆಯಾದ್ಯಂತ ನಡೆಯುವ ವಾರದ ಸಂತೆ, ಜಾತ್ರೆ, ಉತ್ಸವ, ಮೇಳ, ಇತ್ಯಾದಿಗಳನ್ನು ನಿಷೇಧಿಸಿ ಜಿಲ್ಲಾ ಚುನಾವಣಾ ಅಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್ ಅವರು ಆದೇಶ ಹೊರಡಿಸಿದ್ದಾರೆ.