ಮಂಗಳೂರು/ಉಡುಪಿ, ಮೇ 10 (DaijiworldNews/HR): ಕರ್ನಾಟಕ ವಿಧಾನಸಭಾ ಚುನಾವಣೆಯ ಮತದಾನ ಬೆಳಗ್ಗೆ 7 ಗಂಟೆಗೆ ಆರಂಭವಾಗುತ್ತಿದ್ದಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮತದಾರರು ತಮ್ಮ ತಮ್ಮ ಮತಗಟ್ಟೆಗಳ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದರು.
ರಾಜ್ಯದಲ್ಲಿ 5,30,85,566 ಕೋಟಿ ನೋಂದಾಯಿತ ಮತದಾರರಿದ್ದು, ಅದರಲ್ಲಿ 2,66,82,156 ಪುರುಷ ಮತದಾರರು ಮತ್ತು 2,63,98,483 ಮಹಿಳಾ ಮತದಾರರು ಹಾಗೂ 4,927 ಮತದಾರರು ಇತರೆ ವರ್ಗಕ್ಕೆ ಸೇರಿದವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಗತ್ಯ ಸೇವೆಯಲ್ಲಿರುವವರು ಅಂಚೆ ಮತಪತ್ರದ ಮೂಲಕ ಮತ ಚಲಾಯಿಸುತ್ತಾರೆ. ಆಡಳಿತಾರೂಢ ಬಿಜೆಪಿ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಪ್ರತಿಪಕ್ಷ ಕಾಂಗ್ರೆಸ್ ಪಕ್ಷ 223 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಮೇಲುಕೋಟೆ ಕ್ಷೇತ್ರದಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ.