ಮಂಗಳೂರು/ಉಡುಪಿ, ಮೇ 10 (DaijiworldNews/HR): ಕರ್ನಾಟಕ ವಿಧಾನಸಭಾ ಚುನಾವಣೆಗೆ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗುತ್ತಿದ್ದಂತೆ ದಕ್ಷಿಣ ಕನ್ನಡ (ದ.ಕ.) ಮತ್ತು ಉಡುಪಿ ಜಿಲ್ಲೆಗಳಲ್ಲಿ ಮತದಾರರು ತಮ್ಮ ತಮ್ಮ ಮತಗಟ್ಟೆಗಳ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದು, ಬೆಳಗ್ಗೆ 9 ಗಂಟೆಗೆ ದಕ್ಷಿಣ ಕನ್ನಡದಲ್ಲಿ ಶೇ.12.47 ಹಾಗೂ ಉಡುಪಿಯಲ್ಲಿ ಶೇ.13.28ರಷ್ಟು ಮತದಾನವಾಗಿದೆ.
ದಕ್ಷಿಣ ಕನ್ನಡ ಮತ್ತು ಉಡೂಪಿ ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುತ್ತಿದ್ದಾರೆ.
ಇನ್ನು ಇಂದು ಬೆಳ್ಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಹೊರಬೀಳಲಿದೆ.