ಉಪ್ಪಿನಂಗಡಿ, ಮಾ29(SS): ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಪೊಲೀಸರು ವಶಕ್ಕೆ ಪಡೆದು ಅದರಲ್ಲಿದ್ದ ಜಾನುವಾರುಗಳನ್ನು ರಕ್ಷಿಸಿದ ಘಟನೆ ನಡೆದಿದೆ.
ನೆಕ್ಕಿಲಾಡಿ ಜಂಕ್ಷನ್ ಎಂಬಲ್ಲಿ ಆರೋಪಿಗಳು ಅಕ್ರಮವಾಗಿ ಯಾವುದೇ ಪರವಾನಿಗೆಯಿಲ್ಲದೆ 20 ಜಾನುವಾರುಗಳನ್ನು ಎಲ್ಲಿಂದಲೋ ಕಳವು ಮಾಡಿ ಹಿಂಸಾತ್ಮಕ ರೀತಿಯಲ್ಲಿ ಕೈ-ಕಾಲು ಕಟ್ಟಿ ಮಾಂಸಕ್ಕಾಗಿ ಕಸಾಯಿಖಾನೆಗೆ ಸಾಗಾಟ ಮಾಡುತ್ತಿದ್ದರು. ಮಾಹಿತಿ ಮೇರೆಗೆ ದಾಳಿ ನಡೆಸಿದ ಉಪ್ಪಿನಂಗಡಿ ಲೀಸ್ ಠಾಣೆ ಪೊಲೀಸರು, ಜಾನುವಾರುಗಳನ್ನು ಸಾಗಿಸುತ್ತಿದ್ದ ಲಾರಿಯನ್ನು ಪತ್ತೆ ಹಚ್ಚಿ ಲಾರಿ ಸಹಿತ ಜಾನುವಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮಹಮ್ಮದ್ ಸಮೀರ್ ಬಂಧಿತ ಆರೋಪಿ. ಇನ್ನೋರ್ವ ಆರೋಪಿ ಇಸ್ಮಾಯಲ್ ಓಡಿ ಪರಾರಿಯಾಗಲು ಯತ್ನಿಸಿದ್ದನು. ಈ ವೇಳೆ ಆರೋಪಿಗೆ ಬಿದ್ದು ಪೆಟ್ಟಾಗಿದೆ. ಬಳಿಕ ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಶಪಡಿಸಿಕೊಂಡ ಜಾನುವಾರುಗಳ ಹಾಗೂ ಗೂಡ್ಸ್ ಲಾರಿ ವಾಹನದ ಮೌಲ್ಯ ರೂ. 4,55,000 ಎಂದು ಅಂದಾಜಿಸಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.