ಪುತ್ತೂರು, ಮೇ 18 (DaijiworldNews/HR): ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣದಲ್ಲಿ ಪುತ್ತೂರು ನಗರ ಠಾಣೆ ಯಲ್ಲಿ ವಿಚಾರಣೆಗೆ ಒಳಪಡಿಸಿದ ಆರೋಪಿತರಿಗೆ ಪೊಲೀಸರು ಹಲ್ಲೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಅವಿನಾಶ್ ಎಂಬ ಯುವಕನ ತಂದೆ ವೇಣುನಾಥ ಅವರು ತಪ್ಪಿತಸ್ಥ ಪೊಲೀಸರ ವಿರುದ್ದ ದೂರು ನೀಡಿದ್ದಾರೆ.
ಪುತ್ತೂರು ಡಿಎಸ್ಪಿ, ಪುತ್ತೂರು ಗ್ರಾಮಾಂತರ ಠಾಣೆಯ ಪಿಎಸ್ಐ ಮತ್ತು ಪುತ್ತೂರು ಗ್ರಾಮಾಂತರ ಠಾಣೆಯ ಹರ್ಷಿತ್ ಪಿಸಿ, ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ Cr no.39/23 u/s 323,324,506 r/w 34IPC ರಂತೆ ಪ್ರಕರಣ ದಾಖಲಾಗಿದೆ.
ಇನ್ನು ಈ ಪ್ರಕರಣದ ತನಿಖೆಯನ್ನು ಡಿಎಸ್ಪಿ ಬಂಟ್ವಾಳ ರವರಿಗೆ ವಹಿಸಲಾಗಿದ್ದು, ಹೆಚ್ಚುವರಿ ಪೊಲೀಸ್ ಅಧೀಕ್ಷಕರ ವಿಚಾರಣೆ ವರದಿ ಆಧಾರದ ಮೇಲೆ ಪಿಎಸ್ಐ ಪುತ್ತೂರು ಗ್ರಾಮಾಂತರ ಠಾಣೆ ಹಾಗೂ ಹರ್ಷಿತ್ ಪಿಸಿ ಅವರನ್ನು ಸೇವೆಯಿಂದ ಅಮಾನತು ಗೊಳಿಸಲಾಗಿದ್ದು,ಡಿಎಸ್ಪಿ ಪುತ್ತೂರು ರವರ ವಿರುದ್ಧ ಸೂಕ್ತ ಇಲಾಖಾ ಶಿಸ್ತು ಕ್ರಮ ಕೈಗೊಳ್ಳಲು ವರದಿಯನ್ನು ಮೇಲಾಧಿಕಾರಿಗಳಿಗೆ ಸಲ್ಲಿಸಲಾಗುವುದು ಎಂದು ತಿಳಿಸಲಾಗಿದೆ.