ಮಂಗಳೂರು, 24(DaijiworldNews/MS): ನಗರದ ನಂತೂರಿನಲ್ಲಿ ಹಾಗೂ ಕೆ.ಪಿ.ಟಿ ಫ್ಲೈ ಓವರ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿ ಇಂದು ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆ ನಡೆಸಿದರು.
ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿಗಳ ಬಗ್ಗೆಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಹಲವು ಸಲಹೆ ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಮುಖ್ಯಸ್ಥರಾದ ವಿವೇಕ್ ಜೈಸ್ವಾಲ್, ದಕ್ಷಿಣ ಕನ್ನಡ ಅಪರ ಜಿಲ್ಲಾಧಿಕಾರಿಗಳಾದ ಕೃಷ್ಣಮೂರ್ತಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಾದ ಲಿಂಗೇ ಗೌಡ, ದಕ್ಷಿಣ ಕನ್ನಡ ಡಿ.ಎಫ್.ಓ ದಿನೇಶ್, ಮೆಸ್ಕಾಮ್ ಕಾಯನಿರ್ವಹಕ ಇಂಜಿನಿಯರ್ ಲೋಹಿತ್, ವಿಶೇಷ ಭೂ ಸ್ವಾಧೀನಾಧಿಕಾರಿ ಬಿನೋಯ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು