ಬಂಟ್ವಾಳ, ಮೇ 24 (DaijiworldNews/SM): ಮಾಣಿಯಲ್ಲಿ ನಡೆದ ಹಲ್ಲೆಯಿಂದ ಗಾಯಗೊಂಡ ಮಹೇಂದ್ರ ಎಂಬವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಯಿಂದ ಮಂಗಳೂರು ಎಜೆ.ಆಸ್ಪತ್ರೆಗೆ ದಾಖಲಿಸಲಾಗಿದೆ.
ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಎಸ್.ಪಿ. ಬೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಪ್ರಮುಖರು ಬೇಟಿ ನೀಡಿ ಆರೋಗ್ಯ ವಿಚಾರಣೆ ನಡೆಸಿದ್ದಾರೆ. ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು ಇಬ್ಬರು ಯುವಕರಿಗೆ ಮಾರಣಾಂತಿಕ ಹಲ್ಲೆಯಾಗಿತ್ತು ಎಂದು ತಿಳಿದುಬಂದಿದೆ.
ಮಾಣಿ ಜಂಕ್ಷನ್ ನಲ್ಲಿ ಆಕ್ಟೀವ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಒಮ್ನಿ ಕಾರಿನಲ್ಲಿ ಬಂದ ತಂಡ ಸ್ಕೂಟರ್ ಗೆ ಡಿಕ್ಕಿ ಹೊಡೆದು ಬಳಿಕ ಕಾರಿನಿಂದ ಇಳಿದ ತಂಡ ಮಾರಣಾಂತಿಕ ವಾಗಿ ಹಲ್ಲೆ ನಡೆಸಿದೆ ಎಂದು ವಿಟ್ಲ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದೆ. ಮಂಗಳೂರು ನಿವಾಸಿ ರಾಕೇಶ್, ಮಾಣಿ ಮಂಜುನಾಥ್ ಯಾನೆ ಮಂಜು ಹಾಗೂ ಪ್ರವೀಣ್ ನಾಯ್ಕ್ ಯಾನೆ ಮಾಹಲಿಂಗ ಮತ್ತಿತರ ತಂಡ ಹಲ್ಲೆ ನಡೆಸಿದ್ದಾರೆ ಎಂದು ದೂರಿದ್ದಲ್ಲದೆ, ಇವರೆಲ್ಲರೂ ಮಾಣಿ ನಾಗು ಸಹಚರರು ಎಂದು ಕೂಡ ತಿಳಿಸಿದ್ದಾರೆ.
ಚುನಾವಣಾ ಫಲಿತಾಂಶದ ದಿನ ಬಂಟ್ವಾಳ ಶಾಸಕರ ಗೆಲುವಿನ ಹರ್ಷ ಆಚರಣೆ ವೇಳೆ ಪಟಾಕಿ ಸಿಡಿಸಿ ಸಂಭ್ರಮ ಮಾಡುವ ವೇಳೆ ಇದೇ ತಂಡಗಳ ಮಧ್ಯೆ ಗಲಾಟೆ ನಡೆದಿತ್ತು ಎನ್ನಲಾಗಿದೆ.
ಸ್ಥಳಕ್ಕೆ ವಿಟ್ಲ ಪೊಲೀಸರ ತಂಡ ಭೇಟಿ ನೀಡಿ ಪ್ರಕರಣ ದಾಖಲಿಸಿದೆ.