ಬಂಟ್ವಾಳ, ಮೇ 26 (DaijiworldNews/HR): ಮಹಿಳೆಯೋರ್ವರ ಜಡೆಯನ್ನು ಸವರಿ ವಿವಾದವುಂಟುಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಹಿಂದು ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಘಟಕ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ಆರೋಪಿಯನ್ನು ಶೀಘ್ರವಾಗಿ ಬಂಧಿಸುವಂತೆ ಒತ್ತಾಯಿಸಿದೆ.
ಧರ್ಮಸ್ಥಳ ಮಂಗಳೂರು ಸಂಚಾರಿಸುವ ಸರಕಾರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಜಡೆ ಸವರಿದ ಪ್ರಕರಣದ ಬಗ್ಗೆ ದೂರು ದಾಖಲಾಗಿದೆ.
ಮಂಗಳೂರಿನಿಂದ ಸಂಚಾರ ಮಾಡುತ್ತಿದ್ದ ಸರಕಾರಿ ಬಸ್ ನಲ್ಲಿದ್ದ ಪ್ರಯಾಣ ಮಾಡುತ್ತಿದ್ದ ಮಹಿಳೆಯ ಹಿಂಬದಿ ಶೀಟಿನಲ್ಲಿ ಕುಳಿತುಕೊಂಡ ಅಪರಿಚಿತ ವ್ಯಕ್ತಿಯೋರ್ವ ಮಹಿಳೆಯ ಜಡೆಯನ್ನು ಸವರಿದ ವಿಡಿಯೋ ವನ್ನು ಸಹಪ್ರಯಾಣಿಕರು ಚಿತ್ರೀಕರಣ ಮಾಡಿದ್ದಾರೆ.
ಮಣಿಹಳ್ಳ ಸಮೀಪ ಮಹಿಳೆಯ ಜಡೆಗೆ ಕೈ ಹಾಕಿದ ಕಾಮುಕನ ವಿಡಿಯೋ ವೈರಲ್ ಆದ ಬೆನ್ನಲ್ಲೆ ಹಿಂದು ಜಾಗರಣ ವೇದಿಕೆ ಬಂಟ್ವಾಳ ತಾಲೂಕು ವತಿಯಿಂದ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ಶೀಘ್ರವಾಗಿ ಬಂಧಿಸ ಬೇಕು ಎಂದು ಒತ್ತಾಯಿಸಲಾಗಿದೆ.