ಬೈಂದೂರು, ಮೇ 27(DaijiworldNews/MS): ಸರಕಾರಿ ಸೇವೆಯಲ್ಲಿದ್ದಾಗ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಅರಿತು ಕೆಪಸ ಮಾಡಬೇಕು. ಜೊತೆಗೆ ನಿಮ್ಮ ನಿಮ್ಮ ಇಲಾಖೆಯಿಂದ ಜನ ಸಾಮಾನ್ಯರಿಗೆ ಹೆಚ್ಚಿನ ಸೇವೆ ನೀಡಲು ಹೇಗೆ ಸಾಧ್ಯ ಎನ್ನುವ ಚಿಂತನೆ ಮತ್ತು ಕ್ರಿಯಾತ್ಮಕ ಯೋಜನೆಗಳ ಮೂಲಕ ಬೈಂದೂರಿನ ಅಭಿವೃದ್ಧಿಗೆ ಸಹಕರಿಸಿ ಎಂದು ತಾಲೂಕು ಮಟ್ಟದ ಅಧಿಕಾರಿಗಳಿಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಎಚ್ಚರಿಸಿದರು.
ಶುಕ್ರವಾರ ಬೆಳಿಗ್ಗೆ ಬೈಂದೂರು ಪಟ್ಟಣ ಪಂಚಾಯತ್ ಸಭಾಭವನದಲ್ಲಿ ನಡೆದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಸಾರ್ವಜನಿಕ ಅಹವಾಲುಗಳನ್ನೂ ಸ್ವೀಕರಿಸಲಾಯಿತು. ಐ.ಎ.ಎಸ್ ಪ್ರೊಪೇಷನರಿ ಸತೀಶ್, ಕುಂದಾಪುರ ತಹಶೀಲ್ದಾರ ಶೋಭಾಲಕ್ಷ್ಮಿ ಬೈಂದೂರು ತಾ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭಾರತಿ, ಬೈಂದೂರು ತಹಶೀಲ್ದಾರ್ ಶ್ರೀಕಾಂತ ಹೆಗ್ಡೆ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಮ್.ಜಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.