ಮಂಗಳೂರು, ಮೇ 27(DaijiworldNews/HR): ಚುನಾವಣೆ ಪ್ರಚಾರದ ವೇಳೇ ಕಾಂಗ್ರೆಸ್ ಪಕ್ಷ ನೀಡಿರುವ ಉಚಿತ ಗ್ಯಾರೆಂಟಿ ಭರವಸೆಯನ್ನು ಇನ್ನೂ ಅದನ್ನು ಈಡೇರಿಸಿಲ್ಲ. ಒಂದು ತಿಂಗಳ ಒಳಗಾಗಿ ಉಚಿತ ಘೋಷಣೆ ಜಾರಿಯಾಗದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತೇವೆ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದ್ದು, ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಅವರ ಪತ್ನಿ ನೂತನ ಕುಮಾರಿ ಅವರಿಗೆ ಈ ಹಿಂದೆ ಬಿಜೆಪಿ ಸರಕಾರ ಅನುಕಂಪದ ಆಧಾರದಲ್ಲಿ ಕೆಲಸ ಕೊಡಿಸಿತ್ತು. ಇದೀಗ ಕಾಂಗ್ರೆಸ್ ಸರಕಾರದ ಅವರನ್ನು ಉದ್ಯೋಗದಿಂದ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಈ ರೀತಿಯ ದ್ವೇಷ ಸಾಧಿಸದೆ ಅವರಿಗೆ ಮತ್ತೆ ಕೆಲಸ ನೀಡಬೇಕು. ಒಂದು ವೇಳೆ ಕೆಲಸ ನೀಡದಿದ್ದರೆ ಕೇಂದ್ರ ಸರಕಾರ ಸಾಮ್ಯದ ಸಂಸ್ಥೆಗಳನ್ನು ಕೆಲಸ ಕೊಡಿಸುತ್ತೇವೆ ಎಂದರು.
ಇನ್ನು ಬಿಜೆಪಿ ಸರ್ಕಾರದ ಮೇಲೆ ಮಾಡಿದ ಆರೋಪಗಳ ಪೂರ್ಣ ತನಿಖೆ ನಡೆಯಲಿ. ಸಿದ್ಧರಾಮಯ್ಯ ಮೇಲಿರುವ ಲೋಕಾಯುಕ್ತ ಕೇಸ್ ಅನ್ನೂ ತನಿಖೆ ಮಾಡಲಿ ಎಂದಿದ್ದಾರೆ.
ಕಾಂಗ್ರೆಸ್ ಸರ್ಕಾರವು ಶಾಸಕರಾದ ಹರೀಶ್ ಪೂಂಜಾ, ಆಶ್ವತ್ಥ ನಾರಾಯಣ ಮೇಲೆ ಕೇಸು ದಾಖಲಿಸುವ ಮೂಲಕ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ನಳಿನ್ ಆರೋಪಿಸಿದ್ದಾರೆ.