ಮಂಗಳೂರು, ಮೇ 31 (DaijiworldNews/HR): ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ಐಎ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ ವೇಣೂರು ಸೇರಿ 16 ಕಡೆಗಳಲ್ಲಿ ಇಂದು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ್ದಾರೆ.
ದಾಳಿ ನಡೆಸಿರುವ ರಾಷ್ಟ್ರೀಯ ತನಿಖಾ ಸಂಸ್ಥೆ, ದಾಖಲೆಗಳನ್ನು ಪರಿಶೀಲಿಸುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಆಸ್ಪತ್ರೆ ಮತ್ತು ಆಸ್ಪತ್ರೆಯ ಕಚೇರಿಗಳ ಮೇಲೆ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ.
ದೇಶದಲ್ಲಿ ಕೋಮು ಗಲಭೆ ಸೃಷ್ಠಿಸಲು ಯತ್ನ ಆರೋಪದ ತನಿಖೆಯ ಜಾಡು ಹಿಡಿದು ದಕ್ಷಿಣ ಕನ್ನಡ ಜಿಲ್ಲೆಗೆ ಬಂದಿದ್ದ ಎನ್ಐಎ ಅಧಿಕಾರಿಗಳ ತಂಡ ಇತ್ತೀಚೆಗೆ ಬಂಟ್ವಾಳ ಮತ್ತು ಪುತ್ತೂರಿನಲ್ಲಿ ದಾಳಿ ನಡೆಸಿ ಬಂಟ್ವಾಳ ನಿವಾಸಿ ಮಹಮ್ಮದ್ ಸಿನಾನ್, ಸಜಿಪ ಮೂಡದ ಸರ್ಫ್ರಾಜ್ ನವಾಜ್, ಇಕ್ಬಾಲ್, ಪುತ್ತೂರಿನ ಅಬ್ದುಲ್ ರಫೀಕ್ ನನ್ನು ಬಂಧಿಸಿದ್ದರು.