ಉಡುಪಿ, ಜೂ 01 (DaijiworldNews/HR): ಕಾಂಗ್ರೆಸ್ ಪಕ್ಷವು ಮಹಿಳೆಯರಿಗೆ ಸರ್ಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣಕ್ಕೆ ಅನುಮತಿ ನೀಡಿದ್ದು, ಉಡುಪಿ, ಮಂಗಳೂರು, ಶಿವಮೊಗ್ಗ ಸೇರಿದಂತೆ ಈ ಜಿಲ್ಲೆಗಳಲ್ಲಿ ಖಾಸಗಿ ಬಸ್ಗಳನ್ನು ಹೆಚ್ಚಾಗಿ ಅವಲಂಭಿಸಿರುವುದರಿಂದ ಖಾಸಗಿ ಬಸ್ಗಳಲ್ಲೂ ಮಹಿಳಾ ಫ್ರೀ ಪ್ರಯಾಣಕ್ಕೆ ಅವಕಾಶ ನೀಡಿ ಎಂದು ರಾಜ್ಯ ಖಾಸಗಿ ಬಸ್ ಮಾಲಕರ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಒತ್ತಾಯಿಸಿದ್ದಾರೆ.
ಮಾಜಿ ಸಚಿವ ಸುನೀಲ್ ಕುಮಾರ್ ಟ್ವೀಟ್ ಮೂಲಕ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುವವರಿಗೂ ಉಚಿತ ಪ್ರಯಾಣ ನೀಡಬೇಕೆಂದು ಆಗ್ರಹಿಸಿದ್ದು, ಇದಕ್ಕೆ ಅವರ್ ಬೆಂಬಲಕ್ಕೆ ಕುಯಿಲಾಡಿ ಸುರೇಶ್ ನಾಯಕ್ ನಿಂತಿದ್ದಾರೆ.
ಇನ್ನು ಕರಾವಳಿ ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ಖಾಸಗಿ ಬಸ್ ಸಂಚಾರ ಇದ್ದು, ಸರಕಾರಿ ಬಸ್ಸುಗಳಿಗೆ ಕೊಡುವ ಅನುಕೂಲ ಖಾಸಗಿ ಬಸ್ಸುಗಳಿಗೂ ನೀಡಿ. ಹಣದ ರೂಪದಲ್ಲಿ ಅಲ್ಲವಾದರೂ ತೆರಿಗೆ ವಿನಾಯಿತಿ, ಡೀಸೆಲ್ ಸಬ್ಸಿಡಿ ರೂಪದಲ್ಲಿ ಕೊಡಿ. ನಮಗೆ ಆಗುವ ಹೊರೆಯನ್ನು ತುಂಬಿಸಿಕೊಟ್ಟರೆ ಉಚಿತ ಪ್ರಯಾಣಕ್ಕೆ ನಾವು ಸಿದ್ದ ಎಂದು ಸುರೇಶ್ ಹೇಳಿದ್ದಾರೆ.