ಕಾಪು, ಜೂ 01 (DaijiworldNews/HR): ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ಕಂದಾಯ ಇಲಾಖಾಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು.
ಸಭೆಯಲ್ಲಿ ಶಾಸಕರು ಮಾತನಾಡಿ ಮಳೆಗಾಲ ಸಮೀಪಿಸುತ್ತಿದ್ದು ಮಳೆಗಾಲದಲ್ಲಿ ಉಂಟಾಗಬಹುದಾದ ಪ್ರಾಕೃತಿಕ ವಿಕೋಪದ ಪರಿಹಾರ ನೀಡುವಲ್ಲಿ ಅಧಿಕಾರಿಗಳು ವಿಳಂಬ ಮಾಡದೆ ಸಂತ್ರಸ್ತರಿಗೆ ತಕ್ಷಣದಲ್ಲಿ ಪರಿಹಾರ ಒದಗಿಸಬೇಕು. ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಅಪಾಯಕಾರಿ ಮರಗಳ ತೆರವಿಗೆ ಅರಣ್ಯ ಅಧಿಕಾರಿಗಳ ಹಾಗೂ ಮೆಸ್ಕಾಂ ಅಧಿಕಾರಿಗಳ ಸಮನ್ವಯತೆಯಿಂದ ಕರ್ತವೂರು ಕರ್ತವ್ಯ ನಿರ್ವಹಿಸಬೇಕು. 94/ಸಿ ಹಾಗೂ 94/ಸಿ.ಸಿ ಅಡಿ ಬಾಕಿ ಇರುವ ಹಕ್ಕು ಪತ್ರಗಳ ವಿತರಣೆಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳಬೇಕೆಂದು ಹೇಳಿದ ಅವರು ಸಾಮಾಜಿಕ ಭದ್ರತಾ ಯೋಜನೆಗಳ ಹಾಗೂ ಭೂ ಪರಿವರ್ತನಾ ಕಡತಗಳನ್ನು ವಿಳಂಬ ಮಾಡದೆ ಶೀಘ್ರ ವಿಲೇವಾರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಕಾಪು ತಹಶೀಲ್ದಾರರಾದ ಶ್ರೀನಿವಾಸ್ ಕುಲಕರ್ಣಿ, ಉಡುಪಿ ತಹಶೀಲ್ದಾರರಾದ ರವಿ ಅಂಗಡಿ, ಉಡುಪಿ ವಲಯ ಅರಣ್ಯಾಧಿಕಾರಿಗಳಾದ ಸುಬ್ರಹ್ಮಣ್ಯ ಆಚಾರ್, ಹೆಬ್ರಿ ವಲಯ ಅರಣ್ಯಾಧಿಕಾರಿಗಳಾದ ಅನಿಲ್ ಕುಮಾರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.