ಕುಂದಾಪುರ, ಜೂ 07 (DaijiworldNews/HR): ಕರ್ನಾಟಕ ರಾಜ್ಯ ಸರ್ಕಾರದ ನೂತನ ಸಚಿವ ಸಂಪುಟದಲ್ಲಿ ಗೃಹಮಂತ್ರಿಗಳಾಗಿರುವ ಡಾ. ಜಿ. ಪರಮೇಶ್ವರ್ ಅವರು ಕುಟುಂಬ ಸಮೇತರಾಗಿ ಬುಧವಾರ ಬೆಳಿಗ್ಗೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಭೆಟಿ ನೀಡಿ ಮೂಕಾಂಬಿಕೆಯ ದರ್ಶನ ಭಾಗ್ಯ ಪಡೆದರು.
ಈ ಸಂದರ್ಭದಲ್ಲಿ ದೇವಳದ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಅಡಿಗರ ನೇತೃತ್ವದಲ್ಲಿ ನಡೆದ ಚಂಡಿಕಾಹೋಮ ಕಾರ್ಯಕ್ರಮದಲ್ಲಿ ಗೃಹ ಸಚಿವರು ಭಾಗಿಯಾದರು.
ಇನ್ನು ನೂತನ ಗೃಹ ಸಚಿವರನ್ನು ದೇವಸ್ಥಾನದ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು.